ಕೋಲಾರ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ (Srinivasapura) ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಗಂಗಾಧರ್ ಎಂಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಬಸ್‌ನಲ್ಲಿದ್ದ ಪ್ರಯಾಣಿಕರು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಮಗನಿಗಿತ್ತು ಹೆಚ್‌ಐವಿ ಸೋಂಕು
ಘಟನೆಯಲ್ಲಿ ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. – ದರ್ಶನ್ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್