ಹಾಸನ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಕಾರಿನಲ್ಲಿದ್ದ ಚಂದ್ರಶೇಖರ್(55) ಸ್ಥಳದಲ್ಲಿಯೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ಶಾರದಾ(52) ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ.
Advertisement
ಮೃತರು ಸಕಲೇಶಪುರ ತಾಲೂಕಿನ ಬ್ಯಾಕರವಹಳ್ಳಿ ಸಮೀಪದ ಕುಣಿಗಲ್ ಗ್ರಾಮದವರಾಗಿದ್ದು, ಹಾಸನದ ತಮ್ಮ ಮಗಳ ಮನೆಯಲ್ಲಿ ಏರ್ಪಡಿಸಿದ್ದ ದೇವರ ಪೂಜಾ ಕಾರ್ಯವನ್ನು ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಸಲೀಸಾಗಿ ಜೈಲಿನಿಂದ ಹೊರಬರುತ್ತಿರುವ ಹುಬ್ಬಳ್ಳಿ ಕೋಮು ಗಲಭೆಕೋರರು – ಯುಪಿ ಮಾದರಿ ಕ್ರಮಕ್ಕೆ ಆಗ್ರಹ
Advertisement
Advertisement
ಕೆಎಸ್‌ಆರ್‌ಟಿಸಿ ಬಸ್ ಬಿ.ಸಿ.ರೋಡ್ ಘಟಕಕ್ಕೆ ಸೇರಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತಪಟ್ಟಿರುವ ಚಂದ್ರಶೇಖರ್ ಹಳೇಕೆರೆ ಗ್ರಾಮದ ಕಾಫಿ ತೋಟದಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕಾಮಗಾರಿಯ ವಿಳಂಬವೇ ಘಟನೆಗೆ ಕಾರಣ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದಂತ ವೈದ್ಯರ ಎಡವಟ್ಟು – ಚಿಕಿತ್ಸೆ ಪಡೆದ ನಟಿಯ ಮುಖ ಸಂಪೂರ್ಣ ಚೇಂಚ್