ಕೋಲಾರ: ಜಿಲ್ಲೆಯ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ 75ರ ನರಸಿಂಹ ತೀರ್ಥ ಬಳಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಆಯ ತಪ್ಪಿದ ಬಸ್ ರಸ್ತೆ ಪಕ್ಕದ ಕೆರೆಗೆ ಉರುಳಿದೆ.
ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರನಲ್ಲಿದ್ದ ಚಂದ್ರಪ್ಪ ಹಾಗೂ ಭೂಲಕ್ಷ್ಮಮ್ಮ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಬೆಳಗಾವಿಯಿಂದ ತಿರುಪತಿಗೆ ಹೊರಟಿತ್ತು ಎಂದು ತಿಳಿದುಬಂದಿದೆ.
ಮುಳಬಾಗಿಲು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.