ಪೇಜಾವರ ಶ್ರೀಗಳ ಬೆಂಗಾವಲು ವಾಹನ, ಕಾರಿನ ನಡುವೆ ಡಿಕ್ಕಿ- ದಂಪತಿ ದುರ್ಮರಣ

Public TV
1 Min Read
CKB copy 1

ಚಿಕ್ಕಬಳ್ಳಾಪುರ: ಉಡುಪಿ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ರಾಮಕೃಷ್ಣಯ್ಯ(75) ಸರ್ವಲೋಚನಾ(70) ಮೃತ ದಂಪತಿ. ನಾಮಕರಣ ಕಾರ್ಯಕ್ರಮಕ್ಕೆ ಜ್ಯುವೆಲ್ಲರಿ ಶಾಪ್ ಮಾಲೀಕರಾದ ರಾಮಕೃಷ್ಣಯ್ಯ ಕುಟುಂಬ ಸಮೇತ ಚಿಂತಾಮಣಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ರಾಮಕೃಷ್ಣಯ್ಯ ಸೊಸೆ 55 ವರ್ಷದ ನಳಿನಿ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ನಾಗೇಶ್ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿವೆ. ಮತ್ತೊಂದೆಡೆ ಡಿಕ್ಕಿಯಾದ ಹೈವೇ ಪ್ಯಾಟ್ರೋಲಿಂಗ್ ಪೊಲೀಸ್ ವಾಹನದ ಚಾಲಕ ಸೇರಿದಂತೆ ಎಎಸ್ ಶಂಭಯ್ಯ ಕೂಡ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

vlcsnap 2018 11 18 12h46m13s174

ಪೇಜಾವರ ಶ್ರೀಗಳು ಚಿಂತಾಮಣಿ ತಾಲೂಕಿನ ಕೋನಕುಂಟ್ಲು ಗ್ರಾಮದಲ್ಲಿ ನಡೆಯುತ್ತಿರುವ ಕಾನ್ವ ಸಮ್ಮೇಳನದಲ್ಲಿ ಭಾಗವಹಿಸಿಲು ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಆಗಮಿಸುತ್ತಿದ್ದರು. ದಂಪತಿಯಿಂದ ಕಾರು ಬಲ ಭಾಗದಲ್ಲಿ ಬಂದಿದ್ದ ಕಾರಣ ಈ ಅಪಘಾತ ಸಂಭವಿಸಿದೆ.

ಘಟನೆ ಬಳಿಕ ಪ್ರತಿಕ್ರಿಯಿಸಿದ ಪೇಜಾವರ ಶ್ರೀಗಳು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಪ್ರಾಣಾಪಾಯದಲ್ಲಿದ್ದಾರೆ. ನಮ್ಮ ಕಾರಿಗೆ ಏನೂ ಆಗಿಲ್ಲ. ಪೊಲೀಸ್ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆ ಕಾರಿನಲ್ಲಿದ್ದ ಇಬ್ಬರು ಮೃತರಾಗಿದ್ದಾರೆ. ಘಟನೆ ನಡೆದ ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸುವ ಏರ್ಪಾಡು ಮಾಡಿದ್ದೇವೆ. ಒಟ್ಟಿನಲ್ಲಿ ಇದೊಂದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vlcsnap 2018 11 18 12h47m09s226

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *