ಆನೇಕಲ್: ಸರ್ಕಾರಿ ಜೀಪ್ (Government Jeep) ಮತ್ತು ಕಿಯಾ ಕಾರಿನ (Kia Car) ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿಗೆ ಸ್ಥಳದಲ್ಲಿಯೇ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಯಡವನಹಳ್ಳಿ ಗೇಟ್ ಬಳಿ ನಡೆದಿದೆ.
ಬೆಳ್ಳಂಬೆಳಗ್ಗೆ 6 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಜೀಪ್ ಹಾಗು ಕಿಯಾ ಕಾರು ನಡುವೆ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಾರು ಸ್ಥಳದಲ್ಲೇ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ನನಗೆ ಜೀವ ಬೆದರಿಕೆ ಇದೆ, Z ಶ್ರೇಣಿ ಭದ್ರತೆ ಕೊಡಿ: ಅಮಿತ್ ಶಾ, ಸಿದ್ದರಾಮಯ್ಯಗೆ ಜನಾರ್ದನ ರೆಡ್ಡಿ ಪತ್ರ
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಅತ್ತಿಬೆಲೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಾಳೆ ನೇರ ಫೋನ್‌ಇನ್ ಕಾರ್ಯಕ್ರಮ – ನಿಮ್ಮ ಏರಿಯಾ ಸಮಸ್ಯೆ ತಿಳಿಸಿ!

