ಬೆಂಗಳೂರು: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಬಳಿಯ ಸೊಂಡೆಕೊಪ್ಪ ರಸ್ತೆಯ ಸರ್ಕಲ್ ಬಳಿ ನಡೆದಿದೆ.
Advertisement
35 ವರ್ಷದ ರಮೇಶ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ರಮೇಶ್ ಅವರ ಮೇಲೆ ಲಾರಿಯ ಹಿಂಬದಿಯ ಚಕ್ರದಲ್ಲಿ ಹರಿದಿದ್ದರಿಂದ ದೇಹದ ಅರ್ಧಭಾಗ ಅಪ್ಪಚ್ಚಿಯಾಗಿದೆ. ಅದೃಷ್ಟವಷಾತ ಬೈಕ್ ಸವಾರ ವಿಜಯ್‍ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಮೇಶ್ ಮತ್ತು ವಿಜಯ್‍ಕುಮಾರ್ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದರು.
Advertisement
ರಮೇಶ್ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ. ರಮೇಶ್ ನಗರದಲ್ಲಿ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದರು. ಅಪಘಾತದ ನಂತರ ಲಾರಿ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ಸ್ಥಳದ ಪರಿಶೀಲನೆ ನಡೆಸಿದ್ದಾರೆ.
Advertisement
Advertisement