ನೆಲಮಂಗಲ | ಲಾರಿ-ಬೈಕ್ ನಡ್ವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Public TV
1 Min Read
Nelamangala

ನೆಲಮಂಗಲ: ಲಾರಿ ಮತ್ತು ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ (Road Accident) ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ (Nelamangala) ನಗರದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.

ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶ್ರೀರಾಮಪುರದ ಯುವಕ ಪ್ರಜ್ವಲ್ (22), ಯುವತಿ ಸಹನಾ (21) ಮೃತ ದುರ್ದೈವಿಗಳು. ಇದನ್ನೂ ಓದಿ: ಮಹಿಳೆಯ ನಗ್ನ ವಿಡಿಯೋ ರೆಕಾರ್ಡ್‌ ಮಾಡ್ಕೊಂಡು ಬ್ಲ್ಯಾಕ್‌ಮೇಲ್‌ – ಪ್ರತಿಷ್ಠಿತ ದೇವಸ್ಥಾನದ ಅರ್ಚಕ ಅರೆಸ್ಟ್‌

Accident

ಕುಣಿಗಲ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಲಾರಿ ಸಮೇತ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇರಾನ್‌-ಇಸ್ರೇಲ್‌ ಸಂಘರ್ಷ ತೀವ್ರ – ಇಸ್ರೇಲ್‌ ಮಿಸೈಲ್‌ ದಾಳಿಗೆ ಇರಾನ್‌ನ 14 ಅಧಿಕಾರಿಗಳು ಬಲಿ

ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ (Nelamangala Traffic Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಪತನ – 80 ಜನರ ಡಿಎನ್‌ಎ ಮ್ಯಾಚ್, 33 ಮೃತದೇಹಗಳ ಹಸ್ತಾಂತರ

Share This Article