ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Accident) ನಡೆದು ನಾಲ್ವರು ಸಾವನ್ನಪ್ಪಿದ ಘಟನೆ ಮಡಿಕೇರಿ (Madikeri) ತಾಲೂಕಿನ ದೇವರಕೊಲ್ಲಿ ಬಳಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರಿಶು ಮೃತ ದುರ್ದೈವಿಗಳು. ಮಧ್ಯಾಹ್ನ 12:50 ಗಂಟೆ ಸುಮಾರಿನಲ್ಲಿ ಮಡಿಕೇರಿಯಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ. ಇದನ್ನೂ ಓದಿ: ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಸಂಪಾಜೆಯ ಶರತ್ ಕೀಲಾರು, ತಾಜುದ್ದೀನ್ ಸೇರಿದಂತೆ ಯುವಕರ ತಂಡ ನಾಲ್ಕು ಆಂಬ್ಯುಲೆನ್ಸ್‌ನಲ್ಲಿ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟೊತ್ತಿಗಾಗಲೇ ನಾಲ್ವರೂ ಮೃತಪಟ್ಟಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದವಳು ಅನುಮಾನಾಸ್ಪದ ಸಾವು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ