ಮೈಸೂರು: ಟೆಂಪೋ ಟ್ರಾವೆಲರ್ ಹಾಗೂ ಲಾರಿ ಮಧ್ಯೆ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಹುಣಸೂರು ಮಾರ್ಗದ ಬಸರಿಕಟ್ಟೆ ಬಳಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿರುವವರನ್ನು ಅಬ್ದುಲ್ ಹಮೀದ್(47), ಮಹಮದ್ ಇಕ್ಬಾಲ್(37) ಹಾಗೂ ಶೇಕ್ ಹಕೀಬ್(11) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟೆಂಪೋ ಟ್ರಾವೆಲರ್ ನಲ್ಲಿದ್ದವರು ಮಂಗಳೂರಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ ಟ್ರಾವೆಲರ್ ಲಾರಿಯನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.