ಕಾರವಾರ: ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಪಟ್ಟಣದ ಗೋಕುಲ್ ಲಾಡ್ಜ್ ಬಳಿ ನಡೆದಿದೆ.
ಅಂಕೋಲ ತಾಲೂಕಿನ ಬಾವಿಕೇರಿ ನಿವಾಸಿ ಮಂಜುನಾಥ ನಾಯ್ಕ (26) ಮೃತಪಟ್ಟ ದುರ್ದೈವಿ. ಅಂಕೋಲದಿಂದ ಅಂಗಡಿ ಬೈಲ್ ಕಡೆಗೆ ಹೊರಟಿದ್ದ ವಾಯವ್ಯ ಸಾರಿಗೆ ಬಸ್‍ಗೆ ಕುಮಾಟಾ ಕಡೆಯಿಂದ ಬಂದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಂಜುನಾಥ್ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಬೈಕ್ ಸವಾರನ ಅತೀ ವೇಗ ಹಾಗೂ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ತಲೆಗೆ ಗಂಭೀರವಾಗಿ ಏಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv