ಮೈಸೂರು: ಸೈಕಲ್‍ನಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊರವಲಯದ ನಂಜನಗೂಡು ರಸ್ತೆಯ ಬಂಡೀಪಾಳ್ಯ ಬಳಿ ನಡೆದಿದೆ.
ಪಿ. ಶ್ರೀರಾಮ್(16) ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿ. ಶ್ರೀರಾಮ್ ಮೈಸೂರಿನ ಲಕ್ಷ್ಮಿಪುರಂನ ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಇಂದ ಬೆಳಗ್ಗೆ ಶಾಲೆಗೆ ಸೈಕಲ್‍ನಲ್ಲಿ ಹೋಗುವಾಗ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತವಾದ ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಪಘಾತದಿಂದ ರೊಚ್ಚಿಗೆದ್ದ ಸಾರ್ವಜನಿಕರು ರಸ್ತೆ ತಡೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಕೆಲ ಸಮಯದ ಕಾಲ ನಂಜನಗೂಡು ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ತಡೆ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರ ಜೊತೆ ಕೂಡ ಸಾರ್ವಜನಿಕರು ವಾಗ್ವಾದ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv