ಕೋಲಾರ: KSRTC ಬಸ್, ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮಹಿಳೆಯರು ಸೇರಿದಂತೆ ಐದು ಜನ ಸಾವನ್ನಪ್ಪಿದ್ದಾರೆ.
Advertisement
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರು ಪಾಳ್ಯಂನ ಕೆಜಿ ಸತ್ರಂ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಸಾರಿಗೆ ಬಸ್‍ಗೆ ತಿರುಪತಿಯಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಟೆಂಪೋದಲ್ಲಿದ್ದ 11 ಜನ ಗಾಯಗೊಂಡಿದ್ದಾರೆ.
Advertisement
Advertisement
ಟೆಂಪೋ ಟ್ರಾವೆಲರ್ ನಲ್ಲಿದ್ದ 18 ಮಂದಿ ಛತ್ತೀಸ್‍ಗಢದಿಂದ ತಿರುಪತಿ ದರ್ಶನ ಪಡೆದು ಮೈಸೂರು ಪ್ರವಾಸ ಕೈಗೊಂಡಿದ್ರು. ಸಾರಿಗೆ ಬಸ್‍ನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement