ಬೆಂಗಳೂರು: ನಗರದ (Bengaluru) ಸುಮ್ಮನಹಳ್ಳಿ ಜಂಕ್ಷನ್ (Sumanahalli Junction) ರಸ್ತೆಯಲ್ಲಿ ಟ್ರಕ್, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಇಬ್ಬರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭಿರವಾಗಿದೆ.
ಮೃತರನ್ನು ಯೇಸು.ಡಿ ಮತ್ತು ಜೆನ್ನಿಫರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ. ಅಡ್ಡದಾರಿಯಿಂದ ಬಂದ ಟ್ರಕ್ ಸುಮ್ಮನಹಳ್ಳಿ ರಸ್ತೆಗೆ ಇಳಿದಾಗ ಬ್ರೇಕ್ ಫೇಲ್ ಆಗಿ ಮುಂದೆ ಇದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ – ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿ ದುರ್ಮರಣ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಕಾಮಾಕ್ಷಿಪಾಳ್ಯ (Kamakshipalya) ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ