ಮಂಗಳೂರು: ಅತಿ ವೇಗವಾಗಿ ಬಂದ ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿ ಹೊಡೆದು, ಇಬ್ಬರು ಯುವಕರು ಮೃತಪಟ್ಟ ಘಟನೆ ಕುಳೂರು ಸೇತುವೆ ಸಮೀಪದ ಕೆಳಗಡೆಯ ರಸ್ತೆಯಲ್ಲಿ ನಡೆದಿದೆ.
ಮಂಗಳೂರಿನ ಆಕಾಶ್ ಭವನದ ನಿತಿನ್(21) ಹಾಗೂ ಕುಳೂರಿನ ವಿಜೇಶ್(22) ಮೃತ ಯುವಕರು. ಒಂದು ಬೈಕ್ ನದಿಗೆ, ಮತ್ತೊಂದು ರಸ್ತೆಯ ಮೇಲೆ ಬಿದ್ದಿದೆ. ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
- Advertisement 2-
ಅಪಘಾತ ನಡೆದು ಇಬ್ಬರು ಬೈಕ್ ಸವಾರ ಯುವಕರು ಮತ್ತು ಒಂದು ಬೈಕ್ ನೀರಿಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಕಾವೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement 3-
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv