ಬೆಳಗಾವಿ: ಎರಡು ಬೈಕ್‌ಗಳ (Bike) ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆಯ ಇಂಚಲ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ರಸ್ತೆಯಲ್ಲಿ ಈ ಅಪಘಾತವಾಗಿದ್ದು, ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಮೃತರು ಮತ್ತು ರೋಗಿಗಳು ಮುತವಾಡ ಗ್ರಾಮದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ – ಸರ್ಕಾರ ಆದೇಶ
ಇತ್ತ ಎರಡು ಬೈಕ್‌ಗಳ ಮೇಲೆ ತಲಾ ಮೂವರು ಯುವಕರು ಸವಾರಿ ಮಾಡುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐ ಎಫ್.ಐ. ಮಲ್ಲೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ನೀಡಲಾಗುತ್ತಿದೆ. ಇದನ್ನೂ ಓದಿ: ಕೋವಿಡ್‌ನ 2ನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ: ಆರೋಗ್ಯ ಸಚಿವಾಲಯ ಮೂಲಗಳು