ಬೆಂಗಳೂರು: ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟೆನೆ ಬೆಂಗಳೂರು ಗ್ರಾಮಾಂತರ ಆವಲಹಳ್ಳಿ ಬಳಿ ನಡೆದಿದೆ.
ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದಿಂದ ವಿಶೇಷ ಅಭಿಯೋಜಕರಾಗಿ ನೇಮಕಗೊಂಡಿದ್ದ ವಕೀಲ ಭವಾನಿ ಸಿಂಗ್ ಪುತ್ರ ಅಮರ್ ನಾಥ್ ಸಿಂಗ್ (32) ಹಾಗೂ ಅವರ ಸ್ನೇಹಿತ ಜಸ್ವಂತ್ ಸಿಂಗ್ (30) ಮೃತ ದುರ್ದೈವಿಗಳು. ಬೆಂಗಳೂರು ನಗರದ ಕಡೆಯಿಂದ ಹೊಸಕೋಟೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ನಂತರ ಎದುರಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಅಮರ್ ನಾಥ್ ಸಿಂಗ್ ಮತ್ತು ಸ್ನೇಹಿತ ಜಸ್ವಂತ್ ಸಿಂಗ್ ಮೃತಪಟ್ಟಿದ್ದಾರೆ. ಮತ್ತೊಬ್ಬ ಸ್ನೇಹಿತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಆವಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
- Advertisement 3-
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv