ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಲಗೇರಿ ಬಡಾವಣೆ ಬಳಿಯ ಬೈಪಾಸ್ನಲ್ಲಿ ನಡೆದಿದೆ.
ಈ ಘಟನೆ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದ್ದು, ಮೃತಪಟ್ಟವರು ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಕಾರಿನಲ್ಲಿ ಒಟ್ಟು ಮೂವರು ಇದ್ದು, ಬೆಳಗಾವಿಯಿಂದ ಹುಬ್ಬಳ್ಳಿ ಹೋಗುತ್ತಿದ್ದರು. ಆದರೆ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರಿಗೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
- Advertisement 2
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೊತ್ತೊಬ್ಬರಿಗೆ ಗಂಭೀರವಾಗಿ ಗಾಯವಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರಿನಲ್ಲಿದ್ದ ಒಬ್ಬರನ್ನು ಹೊರ ತೆಗೆಯಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement 3
ಅಪಘಾತ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement 4