Connect with us

Karnataka

ಅಪಘಾತವಾಗಿ ನರಳಾಡುತ್ತಿದ್ದ ಗಾಯಾಳು- ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಡಿಕೆಶಿ

Published

on

Share this

ತುಮಕೂರು: ಅಪಘಾತವಾಗಿ ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾನವೀಯತೆ ಮೆರೆದಿದ್ದಾರೆ.

ಕುಣಿಗಲ್ ನ ಚಿಕ್ಕಕೆರೆ ಬಳಿ ಘಟನೆ ಸಂಭವಿಸಿದ್ದು, ಗಾಯಾಳುವನ್ನು ಡಿ.ಕೆ.ಶಿವಕುಮಾರ್ ತಮ್ಮದೇ ಕಾರಿನಲ್ಲಿ ಚಿಕಿತ್ಸೆಗೆ ಕಳುಹಿಸಿದ್ದಾರೆ. ವ್ಯಾಕ್ಸಿನೇಷನ್ ಕಾರ್ಯಕ್ರಮ ನಿಮಿತ್ತ ಡಿಕೆಶಿ ಹುಲಿಯೂರು ದುರ್ಗದ ಕಡೆ ಹೊರಟಿದ್ದರು. ಈ ವೇಳೆ ಚಿಕ್ಕಕೆರೆ ಬಳಿ ಬೈಕ್ ನಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಡಿಕೆಶಿ, ತಕ್ಷಣ ಕಾರು ನಿಲ್ಲಿಸಿ ಕೆಳಗಿಳಿದು ಗಾಯಾಳುವನ್ನು ಉಪಚರಿಸಿದರು. ಇದನ್ನೂ ಓದಿ: ನಿಶ್ಚಿತಾರ್ಥವಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ಯುವತಿ

ಇದೇ ವೇಳೆ ಜೊತೆಯಲ್ಲಿದ್ದ ಕುಣಿಗಲ್ ಶಾಸಕ ಡಾ.ರಂಗನಾಥ್, ಸ್ವತಃ ತಾವೇ ಪ್ರಥಮ ಚಿಕಿತ್ಸೆ ನೀಡಿದರು. ಬಳಿಕ ಗಾಯಾಳುವನ್ನು ಡಿ.ಕೆ.ಶಿವಕುಮಾರ್ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Click to comment

Leave a Reply

Your email address will not be published. Required fields are marked *

Advertisement