ಮುಂಬೈ: ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿದ್ದು, 20 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಧುಳೆಯ ಜಿಲ್ಲೆಯಲ್ಲಿ ತಡರಾತ್ರಿ ನಡೆದಿದೆ.
ಸರ್ಕಾರಿ ಬಸ್ ಔರಂಗಾಬಾದ್ನಿಂದ ಶಹಡಾಕ್ಕೆ ತೆರಳುತ್ತಿತ್ತು. ಭಾನುವಾರ ತಡರಾತ್ರಿ ನಿಮ್ಗುಲ್ನ ಹೆದ್ದಾರಿಯಲ್ಲಿದ್ದ ಟ್ರಕ್ಗೆ ಹಿಂದಿನಿಂದ ವೇಗವಾಗಿ ಬಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರಕ್ ಪಲ್ಟಿಯಾಗಿ ನಜ್ಜುಗುಜ್ಜಾಗಿದೆ ಎಂದು ಪೊಲೀಸ್ ಅಧಿಕಾರಿ ಎ.ಎಲ್.ಪಾಟೀಲ್ ತಿಳಿಸಿದ್ದಾರೆ.
Advertisement
ಅಪಘಾತದಲ್ಲಿ ಬಸ್ ಕೂಡ ನಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಗಾಯಾಳುಗಳನ್ನು ಧುಳೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
Maharashtra: 10 dead and 20 injured after a bus collided with a canter truck near Nimgul village in Dhule, late last night. pic.twitter.com/7i49q3z3pT
— ANI (@ANI) August 19, 2019
Advertisement
ಬಸ್ಸಿನಲ್ಲಿ ಎಷ್ಟು ಜನರಿದ್ದರು ಎಂದು ಖಚಿತವಾಗಿ ತಿಳಿದಿಲ್ಲ. ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಬಸ್ ಚಾಲಕ ಕೂಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಅಪಘಾತಕ್ಕೆ ಬಸ್ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗಿದೆ. ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.