ಬೀದರ್: ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಿಪೂರ್ ಗ್ರಾಮದಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 18 ವರ್ಷದ ಶಾಲಿವಾನ ಹಾಗೂ 19 ವರ್ಷದ ಸಚಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಕೇಳಿಬರುತ್ತಿದೆ. ಇದನ್ನೂ ಓದಿ: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ
ಶೆಂಬೆಳ್ಳಿ ಗ್ರಾಮದ ಇಬ್ಬರು ಯುವಕರು ಬೈಕ್ ನಲ್ಲಿ ಬೀದರ್ ಗೆ ಹೋಗುತ್ತಿರವಾಗ ಘಟನೆಯಾಗಿದ್ದು, ಸಂತಿಪೂರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ದೇವಸ್ಥಾನಗಳ ತೆರವುಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ