-ಕೋಲಾರದಲ್ಲಿ ನಡುರಾತ್ರಿ ಜವರಾಯನ ಅಟ್ಟಹಾಸ
ಕೋಲಾರ: ಟಾಟಾ ಇಂಡಿಕಾ ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಅನಿಗಾನಹಳ್ಳಿ ಬಳಿ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರು ಕೋಲಾರ ಜಿಲ್ಲೆ ಕೆಜಿಎಫ್ ನಗರದ ಚಾಂಪಿಯನ್ ರೀಫ್ ನಿವಾಸಿಗಳು ಎನ್ನಲಾಗಿದೆ.
ಮೃತರನ್ನ ಟಾಟಾ ಇಂಡಿಕಾದಲ್ಲಿದ್ದ ಭರತ್ ಕುಮಾರ್, ರಿಗೋ, ಬಾಬು, ರಮೇಶ್ ಬಾಬು ಎಂದು ಗುರುತಿಸಲಾಗಿದೆ. ಸುಮೋದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv