ಚಿತ್ರದುರ್ಗ: ಲಾರಿಯೊಂದು ಎರಡು ಆಟೋ ಮತ್ತು ಟಾಟಾ ಏಸ್‍ಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 12 ಜನರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಲಾರಿಯ ಟೈರ್ ಸ್ಫೋಟಗೊಂಡು ಎರಡು ಆಟೋ ಹಾಗೂ ಒಂದು ಟಾಟಾ ಏಸ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಜನರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಟೋ ನಾಗಸಮುದ್ರದಿಂದ ರಾಂಪುರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಮೃತರ ಮಾಹಿತಿ ಇನ್ನೂ ನಿಖರವಾಗಿ ತಿಳಿದುಬಂದಿಲ್ಲ.
ಮೃತರೆಲ್ಲರೂ ನಾಗಸಮುದ್ರ ಗ್ರಾಮದ ಸುತ್ತಲಿನ ಗ್ರಾಮದವರು ಎಂದು ಹೇಳಲಾಗಿದೆ. ಆಟೋದಲ್ಲಿದ್ದ ಎಲ್ಲರೂ ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದರು. ಮೃತರಲ್ಲಿ ನಾಲ್ವರು ಮಹಿಳೆಯರು ಉಳಿದವರು ಪುರುಷರಾಗಿದ್ದಾರೆ. 8 ಜನರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಸಂಖ್ಯೆ ಇನ್ನೂ ಹೆಚ್ಚಾಗು ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.