ಇಂಫಾಲ: ಶಾಲಾ ಪ್ರವಾಸಕ್ಕೆಂದು (School Trip) ವಿದ್ಯಾರ್ಥಿಗಳನ್ನು (Students) ಕರೆದೊಯ್ಯುತ್ತಿದ್ದ 2 ಬಸ್‌ಗಳು (Bus) ಭೀಕರ ಅಪಘಾತಕ್ಕೀಡಾಗಿರುವ (Accident) ಘಟನೆ ಮಣಿಪುರದ (Manipur) ನೋನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ.
ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ 2 ಬಸ್‌ಗಳು ಬುಧವಾರ ಬೆಳಗ್ಗೆ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದೆ. ಬಸ್‌ಗಳ ನಿಯಂತ್ರಣ ತಪ್ಪಿ ಭೀಕರ ಅಪಘಾತ ಉಂಟಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಬರಿಮಲೆ ಹಾದಿಯಲ್ಲಿ ಈ ಬಾರಿ 23 ಮಂದಿ ಹೃದಯಾಘಾತದಿಂದ ಸಾವು
Advertisement
Advertisement
ವರದಿಗಳ ಪ್ರಕಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದಾಗಿವೆ. ಬಸ್‌ಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಸಾಗುತ್ತಿತ್ತು. ಆದರೆ ದಾರಿ ಮಧ್ಯೆ ಅನಿರೀಕ್ಷಿತ ಘಟನೆ ನಡೆದಿದೆ. ಇದನ್ನೂ ಓದಿ: ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಪಲ್ಟಿ – 16 ಜನರಿಗೆ ಗಾಯ
Advertisement
ಗಾಯಗೊಂಡ ವಿದ್ಯಾರ್ಥಿಗಳನ್ನು ಬಿಷ್ಣುಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿ ಬಳಿಕ ಇಂಫಾಲದ ರಾಜ್ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.