ರಾಮನಗರ: ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇಳೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ (Petrol) ಬಿದ್ದು ಸುಟ್ಟ ಗಾಯಗಳಾಗಿರುವ ಘಟನೆ ರಾಮನಗರ (Ramanagara) ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಲಕ್ಷ್ಮೀಪುರ ಫ್ರೌಡಶಾಲೆಯಲ್ಲಿ (School) ನಡೆಯುತ್ತಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವೀರಗಾಸೆ ನೃತ್ಯ ಪ್ರದರ್ಶನ ಮಾಡಲಾಗುತ್ತಿತ್ತು. ಈ ವೇಳೆ ರಂಗೋಲಿ ಮೇಲೆ ಪೆಟ್ರೋಲ್ ಹಾಕಲು ಹೋಗಿ ವಿದ್ಯಾರ್ಥಿಗೆ ಬೆಂಕಿ ತಗುಲಿದೆ. ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬದ ಎಫೆಕ್ಟ್ – ಹೂ, ಹಣ್ಣಿನ ದರ ಭಾರೀ ಏರಿಕೆ
Advertisement
Advertisement
5ನೇ ತರಗತಿ ವಿದ್ಯಾರ್ಥಿ ಪ್ರೀತಮ್‌ಗೆ ಕಣ್ಣು, ಮುಖ ಹಾಗೂ ತಲೆ ಭಾಗಕ್ಕೆ ಸುಟ್ಟ ಗಾಯಗಳಾಗಿದ್ದು, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿಕ್ಷಕರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯಕ್ರಮದಲ್ಲಿ ಪೆಟ್ರೋಲ್ ಬಳಕೆ ಮಾಡಿದ್ದು ಸರಿಯಿಲ್ಲ. ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಪೆಟ್ರೋಲ್ ಬಳಸಿದ್ದೇ ಅನಾಹುತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ
Advertisement
Web Stories