ತುಮಕೂರು: ಎಸ್‌ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿ (Village Accountant) ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ (Tumakuru) ಗೂಳೂರಿನಲ್ಲಿ (Gulur) ನಡೆದಿದೆ.
ಭಾವನಾ (26) ಗಂಭೀರ ಗಾಯಗೊಂಡಿರುವ ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಭಾವನಾಗೆ ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು
ಅಧಿಕಾರಿಗಳ ವಿರುದ್ಧ ಆಕ್ರೋಶ:
ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಬೇಗ ಬೇಗ ಎಸ್‌ಐಆರ್ ಮುಗಿಸುವಂತೆ ಒತ್ತಡ ಹಾಕುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೇಟಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಅಹವಾಲು ಆಲಿಸುತ್ತಿದ್ದಾರೆ. ಇದನ್ನೂ ಓದಿ: ಕೆಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ನಡುವೆ ಸರಣಿ ಅಪಘಾತ – ಚಾಲಕ ಗಂಭೀರ, 13 ಮಂದಿಗೆ ಗಾಯ
ಇನ್ನು, ಜಿಲ್ಲಾಧಿಕಾರಿಗಳ ವಿರುದ್ಧ ಭಾವನಾ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ರಾತ್ರಿ 10 ಗಂಟೆವರೆಗೆ ಮೀಟಿಂಗ್ ಮಾಡುತ್ತೀರಿ. ಬೆಳಗ್ಗೆ 6 ಗಂಟೆಗೆ ಮತ್ತೆ ಕೆಲಸಕ್ಕೆ ಕರೆಯುತ್ತೀರಿ. ನಿಮಗೆ ರ‍್ಯಾಂಕಿಂಗ್ ಬೇಕು, ಪ್ರೊಮೋಷನ್ ಬೇಕು. ಅದಕ್ಕೆ ನಮ್ಮ ಮಕ್ಕಳನ್ನು ಬಲಿ ಕೊಡುತ್ತೀರಾ ಎಂದು ಪೋಷಕರು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಮಕ್ಕಳ ನಡುವೆಯೇ ಮಲಗಿತ್ತು ಬೃಹತ್ ನಾಗರಹಾವು – ಅದೃಷ್ಟವಶಾತ್ ಮಕ್ಕಳು ಪಾರು
