ತುಮಕೂರು: ಎಸ್‌ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ (Village Accountant) ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ಗೂಳೂರಿನಲ್ಲಿ (Gulur) ನಡೆದಿದೆ.
ಭುವನಾ (26) ಮೃತ ಗ್ರಾಮ ಲೆಕ್ಕಾಧಿಕಾರಿ. ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದ ಭುವನಾ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಕೈದಿಗಳು ರಿಲೀಸ್

ಏನಾಗಿತ್ತು?
ಎಸ್‌ಐಆರ್‌ನ ಬಿಎಲ್‌ಒಗೆ ಸುಪ್ರವೈಸರ್ ಆಗಿದ್ದ ಭುವನಾ ಗೂಳೂರು ಹೋಬಳಿಯಲ್ಲಿ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 80 ಅಡಿಗೆ ಕುಸಿದ ಕೆಆರ್‌ಎಸ್ ನೀರು – ಜಲಾಶಯಕ್ಕೆ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಭೇಟಿ
ಅಧಿಕಾರಿಗಳ ವಿರುದ್ಧ ಆಕ್ರೋಶ:
ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಬೇಗ ಬೇಗ ಎಸ್‌ಐಆರ್ ಮುಗಿಸುವಂತೆ ಒತ್ತಡ ಹಾಕುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ರು. ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೇಟಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಅಹವಾಲು ಆಲಿಸುತ್ತಿದ್ರು. ಇದನ್ನೂ ಓದಿ: ತಲೆ ಸುತ್ತಿ ಮೆಟ್ರೋ ಹಳಿಗೆ ಬಿದ್ದ ಮಹಿಳೆ – ಪ್ರಾಣಪಾಯದಿಂದ ಪಾರು!
