CrimeDistrictsKarnatakaLatestMain PostMysuru

ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ರಸ್ತೆ ಅಪಘಾತ- ಇಬ್ಬರು ಯುವಕರ ದುರ್ಮರಣ

ಮೈಸೂರು: ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಮೃತರು. ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರು ತ್ರಿಬಲ್ ರೈಡಿಂಗ್‌ನಲ್ಲಿ ಹೋಗುತ್ತಿದ್ದರು. ಆಗ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ನೋಡಿದ್ದಾರೆ. ಇದರಿಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನೂ ಓದಿ: ಎಲ್‍ಪಿಜಿ ಸಿಲಿಂಡರ್ ಸ್ಫೋಟ – ವ್ಯಕ್ತಿ ಸಾವು

crime

ಇದೇ ಆತುರದಲ್ಲಿ ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದರೇ, ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಳೆ ರೌಂಡ್ಸ್ ಬಿಟ್ಟು ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ ಸಿಎಂ

Leave a Reply

Your email address will not be published.

Back to top button