ವಿಜಯಪುರ: ಪ್ರಯಾಗ್‌ರಾಜ್ (Prayagraj) ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ (Vijayapura) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪೋರ್‌ಬಂದರ್ (Porbandar) ಸಮೀಪ ನಡೆದಿದೆ.
ವಿಜಯಪುರ ಜಿಲ್ಲೆಯ ಚಡಚಣ (Chadchan) ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ಇದನ್ನೂ ಓದಿ: ಪ್ರಯಾಗ್‌ರಾಜ್ ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ
Advertisement
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಿಂದ ಚಾಲಕ ಸೇರಿ 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ವೇಳೆ ಮ್ಯಾಕ್ಸಿ ಕ್ಯಾಬ್, ಗುಜರಾತ್‌ನ ಪೋರ್‌ಬಂದರ್ ಸಮೀಪ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿಯಾಗಿದೆ. ಇದನ್ನೂ ಓದಿ: Exclusive| ಬೆಳಗಾವಿ ಕಂಡಕ್ಟರ್ ಮೇಲೆ ದಾಖಲಿಸಿದ್ದ ಪೋಕ್ಸೋ ಕೇಸ್ ಹಿಂಪಡೆದ ದೂರುದಾರೆ
Advertisement
Advertisement
ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಪೋರ್‌ಬಂದರ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್
Advertisement
ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: AAP ಸರ್ಕಾರದಲ್ಲಿ ಹಗರಣ – ದೆಹಲಿ ವಿಧಾನಸಭೆಯಲ್ಲಿ ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ
ಪೋರ್‌ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.