ವಿಜಯಪುರ: ಕಾರ್ಮಿಕರೊಬ್ಬರು ಆಕಸ್ಮಿಕ ವಿದ್ಯುತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಶಿವಾಜಿ ಗಲ್ಲಿಯ ನಿವಾಸಿ ಚಂದ್ರಕಾಂತ್ ಭೀಮಪ್ಪಾ ಗೋಡೆಕಟ್ಟಿ (45) ಮೃತ ಕಾರ್ಮಿಕ. ವ್ಯಕ್ತಿಯು ಪಟ್ಟಣದ ನಂದಿ ತರಕಾರಿ ಮಾರುಕಟ್ಟೆಯ ಪಕ್ಕದ ವಾಣಿಜ್ಯ ಸಂಕೀರ್ಣದಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಆಯ ತಪ್ಪಿ ಸರ್ವಿಸ್ ವಯರ್ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bulldozer is Back – ಟ್ರೆಂಡ್ ಆಯ್ತು ಬುಲ್ಡೋಜರ್, ಬುಲ್ಡೋಜರ್ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ
ಜನರು ಮೃತ ವ್ಯಕ್ತಿಯನ್ನು ನೋಡಲು ಮುಗಿಬಿದ್ದಿದ್ದಾರೆ. ಸಿಪಿಐ ಬಸವರಾಜ ಪಾಟೀಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.