ಬಳ್ಳಾರಿ: 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನವಾಗಿರುವ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಇದನ್ನೂ ಓದಿ: ವಿದೇಶಕ್ಕೆ ಪ್ರಯಾಣಿಸುವಾಗ ವಿಮಾನದಲ್ಲಿ ಎಷ್ಟು ಚಿನ್ನ, ನಗದು ಕೊಂಡೊಯ್ಯಬಹುದು? ಭಾರತದ ಕಸ್ಟಮ್ಸ್ ನಿಯಮಗಳೇನು?
ಭಾನುವಾರ ತಡರಾತ್ರಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಗುಡ್ಡದ ತುಂಬೆಲ್ಲಾ ಆವರಿಸಿಕೊಂಡಿದೆ. ದರೋಜಿ ಗುಡ್ಡದಲ್ಲಿ 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯ ಜೀವಿಗಳು ಹಾಗೂ ಪಕ್ಷಿಗಳು ವಾಸವಾಗಿದ್ದು, ಬೆಂಕಿ ಕೆನ್ನಾಲಿಗೆಯಿಂದ ಕಾಡು ಪ್ರಾಣಿಗಳಿಗೆ ಅಪಾಯದ ಆತಂಕ ಎದುರಾಗಿತ್ತು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
- Advertisement3
ತಡರಾತ್ರಿಯಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ತೊಡಗಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಯಾವುದೇ ವನ್ಯಜೀವಿಗಳ ಪ್ರಾಣಕ್ಕೆ ಹಾನಿಯಾಗಿಲ್ಲ.ಇದನ್ನೂ ಓದಿ: ‘ಅಪ್ಪು’ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್