ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Chennai Expressway) ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ (Tipper) ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಟಿಪ್ಪರ್ ಸುಟ್ಟು ಕರಕಲಾದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿ ಪ್ಲಾಂಟೇಶನ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಬೆಂಗಳೂರಿನಿಂದ ವಿ.ಕೋಟಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಜನಾಂದೋಲನ ಆಕ್ರೋಶ ಯಾತ್ರೆ
ಇನ್ನೂ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚಾಲಕ ಸಂತೋಷ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಟಿಪ್ಪರ್ ನಿಲ್ಲಿಸಿ ಪ್ರಾಣಪಯದಿಂದ ಪಾರಾಗಿದ್ದಾನೆ. ಇನ್ನೂ ನಂಗಲಿ ಮೂಲದ ಸುರೇಶ್ ಎಂಬುವವರಿಗೆ ಸೇರಿದ ಟಿಪ್ಪರ್ ಇದಾಗಿದ್ದು, ಬೆಮೆಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಪ್ರಮೋದ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಕೌಸ್ತುಭ ಫಸ್ಟ್ ಲುಕ್
