ಹಾವೇರಿ: ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ( Cattle Shed) ಬೆಂಕಿಬಿದ್ದು 6 ಹಸುಗಳು (Cows) ಹಾಗೂ 2 ಕರುಗಳು (Calves) ಸಜೀವ ದಹನವಾಗಿರುವ ಘಟನೆ ಹಾವೇರಿ (Haveri) ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ : ನಿಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಶುಭಹಾರೈಸುತ್ತೇನೆ: ದರ್ಶನ್ ಹುಟ್ಟುಹಬ್ಬಕ್ಕೆ ರಕ್ಷಿತಾ ಪ್ರೇಮ್ ವಿಶ್
Advertisement
Advertisement
ಊರಿನ ಹೊರಗಿರುವ ದನದ ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಲಾಗಿತ್ತು. ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿಬಿದ್ದು 6 ಹಸು, 2 ಕರುಗಳು ಸ್ಥಳದಲ್ಲಿಯೇ ಸಜೀವ ದಹನಗೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
Advertisement
ಸುಮಾರು 6 ಲಕ್ಷ ರೂ.ಗೂ ಅಧಿಕ ಮೌಲ್ಯದ ದನದ ಕೊಟ್ಟಿಗೆ ಮತ್ತು ಹಸುಗಳು ಸುಟ್ಟು ಕರಗಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ : ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು
Advertisement
ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.