ರಾಯಚೂರು: ಮಾನ್ವಿ ಪುರಸಭೆ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಪುರಸಭೆಯ ಸಾಮಗ್ರಿ ಹಾಗೂ ವಾಹನಗಳ ನಿಲುಗಡೆಗೆ ಬಳಸುತ್ತಿದ್ದ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಅನಾಹುತದಲ್ಲಿ 1 ಜೆಸಿಬಿ, 2 ಕಸ ಒಯ್ಯುವ ಆಟೋ, ಒಂದು ಟಿಪ್ಪರ್, ನೀರಿನ ಪೈಪುಗಳು, ಸ್ಯಾನಿಟರಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಅವಘಡದಲ್ಲಿ ಅಂದಾಜು 35 ಲಕ್ಷ ರೂ.ಮೌಲ್ಯದ ವಸ್ತುಗಳು ಭಸ್ಮವಾಗಿವೆ.
ಬಿಸಿಲಿನ ತಾಪದಿಂದ ಕಸದ ರಾಶಿಗೆ ಹೊತ್ತಿದ್ದ ಬೆಂಕಿಯಿಂದ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.