ಬೆಂಗಳೂರು: ಫರ್ನಿಚರ್ ಅಂಗಡಿಗೆ (Furniture Shop) ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಫರ್ನಿಚರ್‌ಗಳು ಸುಟ್ಟು ಕರಕಲಾಗಿರುವ ಘಟನೆ ವಿಜ್ಞಾನ ನಗರದಲ್ಲಿ ನಡೆದಿದೆ.
ರಾತ್ರಿ 8:30ಕ್ಕೆ ಅಂಗಡಿ ಮಾಲೀಕ ಎಂದಿನಂತೆ ಅಂಗಡಿ ಬಂದ್ ಮಾಡಿಕೊಂಡು ಮನೆಗೆ ಹೋಗಿದ್ದಾರೆ. 9:30ರ ಸುಮಾರಿಗೆ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದವರು ನೋಡಿ ಮಾಲೀಕ ಶಿವರಾಜನ್‌ಗೆ ಕರೆ ಮಾಡಿ ವಿಷಯ ತಿಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಅಂಗಡಿಯಲ್ಲಿದ್ದ ಫರ್ನಿಚರ್ಸ್‌ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಬೆಂಕಿ ದೊಡ್ಡಮಟ್ಟದಲ್ಲಿ ಅವರಿಸಿಕೊಂಡಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ಗೆ ಕೋವಿಡ್ ದೃಢ
ಎರಡು ಅಗ್ನಿಶಾಮಕ ವಾಹನಗಳಲ್ಲಿ ಬಂದ ಅಗ್ನಿಶಾಮಕ ಸಿಬ್ಬಂದಿ ಅಕ್ಕಪಕ್ಕದಲ್ಲಿರೋ ಫರ್ನಿಚರ್ಸ್ ಅಂಗಡಿಗಳಿಗೆ ಬೆಂಕಿ ತಗುಲದಂತೆ ಎಚ್ಚರವಹಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿ ಬಂದ್ ಆಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಲೀಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಬೆಂಕಿ ತಗುಲಿರೋ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆ ಸಂಬಂಧ ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದರ್ಶನ್‌ಗೆ ಜೈಲೂಟದಿಂದ ಇಂದು ಮುಕ್ತಿ ಸಿಗುತ್ತಾ? – ಹೈಕೋರ್ಟ್‌ನಲ್ಲಿ ಭವಿಷ್ಯ