ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ (Delhi Election) ಮುಕ್ತಾಯವಾಗಿದ್ದು ಚುನಾವಣೋತ್ತರ ಸಮೀಕ್ಷೆಗಳು (Exit Poll) ಪ್ರಕಟಗೊಳ್ಳುತ್ತಿದೆ. ಈ ಬಾರಿ ಬಿಜೆಪಿ (BJP) ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
MATRIZE ಸಮೀಕ್ಷೆಯ ಪ್ರಕಾರ ಬಿಜೆಪಿ 35-40, ಆಪ್ 32-37, ಕಾಂಗ್ರೆಸ್ 0-1 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಜೆವಿಸಿ ಸಮೀಕ್ಷೆಯಲ್ಲಿ ಬಿಜೆಪಿ 39-45, ಆಪ್ 22-31, ಕಾಂಗ್ರೆಸ್ 0-2 ಸ್ಥಾನ ಗೆಲ್ಲಬಹುದು ಎಂದು ತಿಳಿಸಿದೆ.
ಒಂದು ವೇಳೆ ಸಮೀಕ್ಷೆಗಳ ಪ್ರಕಾರ ಬಿಜೆಪಿ ದೆಹಲಿಯ ಚುಕ್ಕಾಣಿ ಹಿಡಿದರೆ 27 ವರ್ಷದ ಬಳಿಕ ಗದ್ದುಗೆ ಏರಿದಂತಾಗುತ್ತದೆ.
ಒಟ್ಟು 70 ಕ್ಷೇತ್ರಗಳಿಗೆ 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷಿಸಿಕೊಳ್ತಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.
ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ (BJP) ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.