ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಎನ್.ಕುಮಾರ್ (N. Kumar) ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಹಲವರು ಕೇಳಿದ್ದರು. ಸುದೀಪ್ (Sudeep) ಮೇಲಿನ ಆರೋಪಕ್ಕೆ ನಿಮ್ಮ ಹತ್ತಿರ ಇರುವ ಸಾಕ್ಷ್ಯವನ್ನು ಬಹಿರಂಗಪಡಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಈ ಕುರಿತು ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಬಹಿರಂಗವಾಗಿ ದಾಖಲೆ ನೀಡುವುದಿಲ್ಲ ಎಂದಿದ್ದಾರೆ.
ರವಿಚಂದ್ರನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರ್, ‘ನಾನು ಯಾವುದೇ ಕಾರಣಕ್ಕೂ ದಾಖಲೆಗಳನ್ನು ಬಹಿರಂಗಗೊಳಿಸುವುದಿಲ್ಲ. ರವಿಚಂದ್ರನ್ ಅವರು ಸೇರಿದಂತೆ ಹಲವರು ಧರಣಿಯನ್ನು ಕೈಬಿಡುವಂತೆ ಹೇಳಿದ್ದಾರೆ. ಅವರ ಮೇಲಿನ ಗೌರವದಿಂದಾಗಿ ಧರಣಿ ನಿಲ್ಲಿಸೋಕೆ ನಿರ್ಧಾರ ಮಾಡಿದ್ದೀನಿ. ಈ ವಿಷಯದ ಕುರಿತಂತೆ ಏನೇ ಬೆಳವಣಿಗೆ ನಡೆದರೂ ಎಲ್ಲವನ್ನೂ ಹಿರಿಯರ ಗಮನಕ್ಕೆ ತರುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ:ಭಾವಿ ಪತ್ನಿ ಲಾವಣ್ಯ ಜೊತೆ ವರುಣ್ ತೇಜ್ ಕಾಫಿ ಡೇಟ್
ಸುದೀಪ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ನಿರ್ಮಾಪಕರ ಸಂಘದ ಪದಾಧಿಕಾರಿಗಳು ರವಿಚಂದ್ರನ್ (Ravichandran) ಅವರನ್ನು ಭೇಟಿ ಮಾಡಿದ್ದರು. ಇಂದು ಸ್ವತಃ ನಿರ್ಮಾಪಕ ಕುಮಾರ್ ಅವರೇ ರವಿಚಂದ್ರನ್ ಅವರನ್ನು ಭೇಟಿ ಮಾಡಿ, ಸುದೀಪ್ ಮತ್ತು ತಮ್ಮ ನಡುವಿನ ಸಂಗತಿಯನ್ನು ತಿಳಿಸಿದ್ದಾರೆ. ತಮಗೆ ನ್ಯಾಯ ಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕುಮಾರ್ ಭೇಟಿಯ ನಂತರ ಮಾತನಾಡಿದ ರವಿಚಂದ್ರನ್, ‘ಕುಮಾರ್ ಎಲ್ಲವನ್ನೂ ಹೇಳಿದ್ದಾರೆ. ಪರಿಸ್ಥಿತಿ ತಣ್ಣಗಾಗಬೇಕು. ಸುದೀಪ್ ಹತ್ತಿರ ನಾನು ಮಾತಾಡ್ಬೇಕು. ಎರಡು ಕಥೆಗಳನ್ನ ಕೇಳ್ತೀನಿ. ನನ್ನ ನಿರ್ಧಾರಕ್ಕೆ ಇಬ್ಬರೂ ಬದ್ಧರಾಗಬೇಕು. 20 ವರ್ಷದ ಕಥೆಯಂತೆ ಕಾಣ್ತಿದೆ. ಸುದೀಪ್ ಆದಷ್ಟು ಬೇಗ ಸಿಕ್ತಾರೆ. ಈಗಾಗಲೇ ಇಬ್ಬರೂ ನೊಂದಿದ್ದಾರೆ. ಚಿತ್ರರಂಗದಲ್ಲಿ ನಾವು ಸರಿಯಾಗಬೇಕು. ಒಕ್ಕೂಟದಲ್ಲಿ ಒಗ್ಗಟ್ಟಿರಬೇಕು. ಈ ಸಮಸ್ಯೆಯನ್ನು ಬಗೆಹರಿಸೋಕೆ ನಾನು ಟ್ರೈ ಮಾಡ್ತೀನಿ. ಪರಿಹಾರ ನಾನು ಹುಡುಕೋ ಪ್ರಯತ್ನ ಮಾಡ್ತೀನಿ. ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬಿಡಬೇಕು. ಎಲ್ಲರೂ ಚೆನ್ನಾಗಿರಬೇಕು ಅಂತ ನನ್ನಾಸೆ. ಸುದೀಪ್ ನನಗೆ ಮಾಣಿಕ್ಯ ಚಿತ್ರದಿಂದ ತುಂಬಾ ಕ್ಲೋಸ್ ಆದವರು. ಕುಮಾರ್ ಮುಂಚೆಯಿಂದ ಗೊತ್ತು. ದಾಖಲೆಗಳನ್ನ ನಾನು ಮೊದಲು ನೋಡ್ತೀನಿ. ಆಮೇಲೆ ಸುದೀಪ್ ಹತ್ರ ಮಾತಾಡ್ತೀನಿ’ ಎಂದಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]