– 35ಕ್ಕೂ ಹೆಚ್ಚು ಸರ್ವೇ ನಂಬರ್ ಪರಿಶೀಲನೆ
ರಾಮನಗರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿ ಕಂದಾಯ ಇಲಾಖೆ (Revenue Department) ಅಧಿಕಾರಿಗಳು ಸರ್ವೇ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ಕೆಲಸ ಮಾಡದ ಮೋದಿಯನ್ನು ಕೆಳಗಿಳಿಸಿ, ಗಡ್ಕರಿಯನ್ನು ಪ್ರಧಾನಿ ಮಾಡಿ: ಸಂತೋಷ್ ಲಾಡ್
ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್ ಪ್ರಕಾಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಸರ್ವೇ ಕಾರ್ಯ ನಡೆದಿದೆ. ಸುಮಾರು 35ಕ್ಕೂ ಹೆಚ್ಚು ಸರ್ವೇ ನಂಬರ್‌ಗಳನ್ನ ಪರಿಶೀಲನೆ ಮಾಡಲಾಗಿದೆ. ಹೆಚ್.ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ್ ಹಾಗೂ ಸಂಬಂಧಿ ಡಿ.ಸಿ ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನ ಸರ್ವೇ ನಡೆಸಿದ್ದಾರೆ. ಇದನ್ನೂ ಓದಿ: Bengaluru | ಪತಿಗೆ ಅಕ್ರಮ ಸಂಬಂಧ – ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ
ಹೆಚ್‌ಡಿಕೆ ವಿರುದ್ಧದ ಆರೋಪ ಏನು?
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು 14 ಎಕರೆ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಂದಾಯ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿತ್ತು. ಆದಾಗ್ಯೂ ವರದಿ ನೀಡಲು ವಿಳಂಬವಾದ ಹಿನ್ನೆಲೆ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಕೋರ್ಟ್ ತಾಕೀತು ಮಾಡಿತ್ತು.
ಕೋರ್ಟ್ ಸೂಚನೆಯಂತೆ ಇಂದು ಜಮೀನು ಸರ್ವೇ ಕಾರ್ಯ ನಡೆಸಿರುವ ಕಂದಾಯ ಇಲಾಖೆ ಅಧಿಕಾರಿಗಳು ಬಳಿಕ ಜಿಲ್ಲಾಧಿಕಾರಿಗಳಿಗೆ ಸರ್ವೇ ವರದಿ ಸಲ್ಲಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: 17ರ ಬಾಲಕಿ ಮೇಲೆ ಅತ್ಯಾಚಾರ – ಮೃತ ವ್ಯಕ್ತಿಯ ವಿರುದ್ಧ ಪೋಕ್ಸೋ ಕೇಸ್