ಬೆಂಗಳೂರು: ನಮ್ಮ ಮೆಟ್ರೋ ಟ್ರೈನ್‌ನಲ್ಲಿ (Namma Metro Train) ಯುವತಿಯರ ವಿಡಿಯೋ ಸೆರೆಹಿಡಿದು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯೊಬ್ಬನನ್ನ ಬನಶಂಕರಿ ಪೊಲೀಸರು (Banashankari Police) ಬಂಧಿಸಿರುವ ಘಟನೆ ಬೆಂಗಳೂರಿನ ಪೀಣ್ಯ ಬಳಿ ನಡೆದಿದೆ.
ಹಾಸನ (Hassan) ಹೊಳೆನರಸೀಪುರ ಮೂಲದ ದಿಗಂತ್ ಬಂಧಿತ ಆರೋಪಿ. ಇದನ್ನೂ ಓದಿ: ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ – ಅವಮಾನಗೊಂಡಿದ್ದರಿಂದ ಡೆತ್‌ನೋಟ್ ಬರೆದು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ
ಹೊಳೆನರಸೀಪುರ ಮೂಲದ ದಿಗಂತ್ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡಿ ತನ್ನ ʻಮೆಟ್ರೋ ಚಿಕ್ಸ್ʼ ಹೆಸರಿನ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದ. 5,538 ಫಾಲೋವರ್ಸ್‌ಗಳನ್ನ ಹೊಂದಿದ್ದ ಈ ಖಾತೆಯಲ್ಲಿ 13ಕ್ಕೂ ಹೆಚ್ಚು ವಿಡಿಯೋಗಳನ್ನ ಅಪ್‌ಲೋಡ್ ಮಾಡಿ ವೈರಲ್ ಮಾಡಿದ್ದ. ಅಲ್ಲದೇ ಯುವತಿಯರ ಬಗ್ಗೆ ವಿಶ್ಲೇಷಣೆ ಮಾಡುತ್ತಾ ವಿಕೃತಿ ಮೆರೆಯುತ್ತಿದ್ದ.
ಇದರ ವಿರುದ್ಧ ಸಾರ್ವಜನಿಕರಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದಿಗಂತ್ ಕೆಲ ವಿಡಿಯೋಗಳನ್ನ ಡಿಲೀಟ್ ಕೂಡ ಮಾಡಿದ್ದ. ಈ ಸಂಬಂಧ ಇನ್‌ಸ್ಟಾಗ್ರಾಮ್ ಪೇಜ್ ವಿರುದ್ಧ ಬನಶಂಕರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಯನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇದನ್ನೂ ಓದಿ: ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ
ತಿಗಳಪಾಳ್ಯದಲ್ಲಿ ವಾಸವಾಗಿದ್ದ ದಿಗಂತ್ ಖಾಸಗಿ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಕೆಲಸದ ದಿನಗಳಲ್ಲಿ ತಿಗಳಪಾಳ್ಯದಿಂದ ಮುರುಗೇಶ್‌ಪಾಳ್ಯದವರೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದ. ಈ ಸಂದರ್ಭದಲ್ಲೇ ಯುವತಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಇದನ್ನೂ ಓದಿ: ಸೂಕ್ಷ್ಮ ಮಾಹಿತಿ ಸೋರಿಕೆ – 600 ಪಾಕಿಸ್ತಾನಿಯರ ಸಂಪರ್ಕದಲ್ಲಿದ್ದ ಬೇಹುಗಾರ ವಾರಣಾಸಿಯಲ್ಲಿ ಅರೆಸ್ಟ್