ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಫೈರಿಂಗ್ ನಡೆಸಿದ ಘಟನೆ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ.
ರಾಹುಲ್ ಅಲಿಯಾಸ್ ಗೋವಿಂದನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 22ರಂದು ವೇದ ಮೂರ್ತಿ ಎಂಬವರನ್ನು ರಾಹುಲ್ ಕೊಲೆಗೆ ಯತ್ನಿಸಿದ್ದನು. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದಾಗ ಆತ ಹಲ್ಲೆಗೆ ಮುಂದಾಗಿದ್ದಾನೆ.
Advertisement
Advertisement
ಆರೋಪಿ ರಾಹುಲ್ ಮಾರಕಾಸ್ತ್ರಗಳಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ರಾಹುಲ್ ಮೇಲೆ ಗುಂಡು ಹಾರಿಸಿದ್ದಾರೆ. ಇನ್ಸ್ ಪೆಕ್ಟರ್ ವೀರೇಂದ್ರ ಪ್ರಸಾದ್ ಅವರು ಆರೋಪಿ ರಾಹುಲ್ ಮೇಲೆ ಗುಂಡು ಹಾರಿಸಿದ್ದಾರೆ.
Advertisement
ಈ ಘಟನೆಯಲ್ಲಿ ಗಾಯಗೊಂಡ ಪೇದೆ ಹಾಗೂ ಆರೋಪಿ ರಾಹುಲ್‍ನನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ರಾಹುಲ್ ಮೇಲೆ ಕೊಲೆ ಯತ್ನ, ಡಕಾಯಿತಿ ಪ್ರಕರಣಗಳು ದಾಖಲಾಗಿತ್ತು. ಪೊಲೀಸರು ಬಹುದಿನಗಳಿಂದ ರಾಹುಲ್‍ಗಾಗಿ ಶೋಧಕಾರ್ಯ ನಡೆಸುತ್ತಿದ್ದರು.
Advertisement
ತಡರಾತ್ರಿ ಸಿಕ್ಕ ಖಚಿತ ಮಾಹಿತಿ ಮೇರೆಗೆ ಬ್ಯಾಟರಾಯನಪುರ ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ರಾಹುಲ್ ಪೊಲೀಸರ ಮೇಲೆಯೇ ಮಚ್ಚು ಬೀಸಿದ್ದಾನೆ. ಆಗ ಬ್ಯಾಟರಾಯನಪುರ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]