Advertisements

ಕಾರಿನ ಗಾಜು ಪುಡಿ ಮಾಡಿದ ಕಿಡಿಗೇಡಿಗಳು- ಸಿಸಿ ಕ್ಯಾಮರಾದಲ್ಲಿ ದುಷ್ಕೃತ್ಯ ಸೆರೆ

ಶಿವಮೊಗ್ಗ: ದುಷ್ಕರ್ಮಿಗಳ ತಂಡವೊಂದು ಮನೆಯ ಮುಂದೆ ನಿಲ್ಲಿದ್ದ ಕಾರಿನ ಗಾಜುಗಳನ್ನು ಒಡೆದು ಪುಡಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

Advertisements

ಶಿವಮೊಗ್ಗದ ಊರುಗಡೂರು ಬಡಾವಣೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮುಖಕ್ಕೆ ಬಟ್ಟೆ ಕಟ್ಟಿಕೊಂಡ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ದೊಣ್ಣೆಯಿಂದ ಒಡೆದು ಪುಡಿ ಮಾಡಿ ಹೋಗಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮುಂದೆ ಹೋದ ಕಿಡಿಗೇಡಿಗಳು ಪುನಃ ಉದ್ದೇಶಪೂರ್ವಕವಾಗಿಯೇ ವಾಪಸ್ ಬಂದು ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ- ಆರೋಪಿ ಪತಿಯನ್ನೇ ಜೈಲಿಗಟ್ಟಿದ ಜೈಲರ್ ಪತ್ನಿ!

Advertisements

ಕಳೆದ ಶುಕ್ರವಾರ ಊರುಗಡೂರಿನ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ ಮೂರು ಮನೆಯ ಕಾರುಗಳನ್ನು ಕಿಡಿಗೇಡಿಗಳು ಜಖಂಗೊಳಿಸಿದ್ದಾರೆ. ಘಟನೆ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಗವಂತ್ ಮಾನ್ ಅಹಂಕಾರಿಯಲ್ಲ- ಸ್ವಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಕೈ ಮುಖಂಡ ಸಿಧು

Advertisements
Exit mobile version