ನವದೆಹಲಿ: ಶಂಕೆ ಆಧಾರದಲ್ಲಿ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಲಾಗುವುದು ಎಂದು ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠವು, ನ್ಯಾಯಸಮ್ಮತವಾಗಿ ಅನುಮಾನಾಸ್ಪದವಾಗಿ ತಪ್ಪಿತಸ್ಥ ಎಂದು ಸಾಬೀತುಪಡಿಸದ ಹೊರತು ಆರೋಪಿಯನ್ನು ನಿರಪರಾಧಿ ಎಂದು ಭಾವಿಸಲಾಗುತ್ತದೆ ಎಂದು ಹೇಳಿದೆ. ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಳಿನಿ
Advertisement
Advertisement
ಶಂಕೆ ಎಷ್ಟೇ ಬಲವಾಗಿರಬಹುದು, ಅದು ಸಮಂಜಸವಾದ ಸಂದೇಹವನ್ನು ಮೀರಿ ಪುರಾವೆಯ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ ಎಂಬುದು ಕಾನೂನು. ಶಂಕೆ ಎಷ್ಟೇ ಬಲವಾಗಿದ್ದರೂ, ಅದರ ಆಧಾರದ ಮೇಲೆ ಆರೋಪಿಗೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ಒತ್ತಿ ಹೇಳಿದೆ.
Advertisement
ಸೆಕ್ಷನ್ 302 ಮತ್ತು ಸೆಕ್ಷನ್ 201 ಅಪರಾಧಗಳಿಗೆ ಪಂಜಾಬ್ ಮತ್ತು ಹರಿಯಾಣದ ಉಚ್ಚ ನ್ಯಾಯಾಲಯವು ಶಿಕ್ಷೆ ವಿಧಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಬಡವರಿಗೆ ತೆರಿಗೆ ಹೊರೆ; ಶ್ರೀಮಂತರಿಗೆ ಮಾತ್ರ ವಿನಾಯಿತಿ – ಕೇಂದ್ರದ ವಿರುದ್ಧ ಕೇಜ್ರಿವಾಲ್ ಕಿಡಿ
Advertisement
ವ್ಯಕ್ತಿಯ ಪರ ವಾದ ಮಂಡಿಸಿದ ವಕೀಲ ರಿಷಿ ಮಲ್ಹೋತ್ರಾ, ಮೃತದೇಹದ ಕುರಿತು ಮರಣೋತ್ತರ ಪರೀಕ್ಷೆಯಿಂದ ಯಾವುದೇ ಅಂಶ ಸಾಬೀತಾಗಿಲ್ಲ ಎಂದು ತಿಳಿಸಿದ್ದಾರೆ.