ಶಿವಮೊಗ್ಗ: ಶಿವಮೊಗ್ಗ (Shivamogga) ನಗರದಲ್ಲಿ ಫೆ.20 ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ (Harsha) ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾಧಿಕ್ (52) ಎಂಬಾತನಿಗೆ ಎನ್‍ಐಎ (NIA) ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು (Bail) ನೀಡಿದೆ.
Advertisement
ಸೆಕೆಂಡ್ ಹ್ಯಾಂಡ್ ಕಾರ್ (Car) ಡೀಲರ್ ಆಗಿರುವ ಸಾಧಿಕ್‍ನನ್ನು ಫೆ. 24 ರಂದು ಪೊಲೀಸರು (Police) ಬಂಧಿಸಿದ್ದರು. ಹರ್ಷ ಕೊಲೆ ಪ್ರಕರಣದಲ್ಲಿ 10ನೇ ಆರೋಪಿಯಾಗಿರುವ ಈತ, ಪ್ರಕರಣದ 6ನೇ ಆರೋಪಿ ಜಿಲಾನ್‍ನ ತಂದೆ. ಸಾಧಿಕ್, ಜಾಮೀನು ಕೋರಿ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸಾಧಿಕ್ ಪರ ವಕೀಲರು, ಕಕ್ಷಿದಾರರು ಹರ್ಷ ಕೊಲೆ ಪ್ರಕರಣದ ಆರೋಪಿಯಾದ ತಮ್ಮ ಮಗ ಜಿಲಾನ್‍ಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬೆಂಗಳೂರಿನ ಸ್ನೇಹಿತನ ಮನೆಯಲ್ಲಿ ಆಶ್ರಯ ಕೊಡಿಸಿದ್ದರು. ಅದನ್ನು ಹೊರತುಪಡಿಸಿದರೆ ಕಕ್ಷಿದಾರರ ವಿರುದ್ಧ ಬೇರೆ ಯಾವುದೇ ಆರೋಪವಿಲ್ಲ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಿದ್ದರು. ಇದನ್ನೂ ಓದಿ: ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ, ಮಸೀದಿ ಧ್ವಂಸ- 10ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ
Advertisement
Advertisement
ಎನ್‍ಐಎ ಪರ ವಾದ ಮಂಡಿಸಿದ ವಕೀಲರು, ಸಾದಿಕ್ ಖರೀದಿಸಿದ್ದ ಕಾರುಗಳನ್ನು ಇತರೆ ಆರೋಪಿಗಳು ಅಪರಾಧ ಕೃತ್ಯ ಎಸಗಲು ಮತ್ತು ಕೃತ್ಯದ ಬಳಿಕ ಸ್ಥಳದಿಂದ ತಪ್ಪಿಸಿಕೊಳ್ಳಲು ಬಳಕೆ ಮಾಡಿದ್ದಾರೆ. ಜೊತೆಗೆ ಸಾಧಿಕ್, ತಮ್ಮ ಮಗನಿಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ ಮತ್ತು ಸ್ನೇಹಿತನ ಮನೆಯಲ್ಲಿ ಆಶ್ರಯ ಕೊಡಿಸಿದ್ದಾನೆ. ಹೀಗಾಗಿ, ಇತರೆ ಆರೋಪಿಗಳ ಅಪರಾಧ ಕೃತ್ಯವು ಸಾಧಿಕ್‍ಗೆ ಚೆನ್ನಾಗಿ ತಿಳಿದಿತ್ತು. ಈ ಕಾರಣಕ್ಕೆ ಸಾಧಿಕ್‍ಗೆ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕೇರಳ ನರಬಲಿ ಪ್ರಕರಣ – ನರಭಕ್ಷಕರ ಜಾಡು ಹಿಡಿದಿದ್ದು ಹೀಗೆ
Advertisement
ಅರ್ಜಿಯ ವಿಚಾರಣೆ ನಡೆಸಿದ ಎನ್‍ಐಎ ವಿಶೇಷ ನ್ಯಾಯಾಲಯ ಆರೋಪಿಯು 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ನೀಡಬೇಕು. ನ್ಯಾಯಾಲಯ ವಿನಾಯಿತಿ ನೀಡದ ಹೊರತು ಪ್ರತಿಬಾರಿ ಪ್ರಕರಣದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ನಾಶ ಮಾಡಬಾರದು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.