ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

Public TV
1 Min Read
Businessman BJP Leader Gopal Khemka Shot Dead In Front Of Patna House

ಪಾಟ್ನಾ: ಬಿಹಾರ (Bihar) ರಾಜಧಾನಿ ಪಾಟ್ನಾದ (Patna) ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋಪಾಲ್ ಖೇಮ್ಕಾ (Gopal Khemka) ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಿಹಾರ ಪೊಲೀಸರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ಅಲಿಯಾಸ್ ರಾಜಾನನ್ನು ಪಾಟ್ನಾದ ಮಾಲ್ ಸಲಾಮಿ ಪ್ರದೇಶದಲ್ಲಿ ಎನ್‌ಕೌಂಟರ್ ಮಾಡಿದ್ದಾರೆ. ಪೊಲೀಸರು ಆತನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ವಾಂಟೆಡ್ ಕ್ರಿಮಿನಲ್ ವಿಕಾಸ್‌ನನ್ನು ದಮೈಯಾ ಘಾಟ್ ಬಳಿ ನಸುಕಿನ ಜಾವ 2:45ರ ಸುಮಾರಿಗೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಘಟನಾ ಸ್ಥಳದಿಂದ ಒಂದು ಪಿಸ್ತೂಲ್, ಒಂದು ಗುಂಡು ಮತ್ತು ಒಂದು ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ ಎಂದು ಬಿಹಾರ ಪೊಲೀಸರು (Bihar Police) ಅಧಿಕೃತ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರು| ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಸಾವು

ಮೃತ ವಿಕಾಸ್, ಗೋಪಾಲ್ ಖೇಮ್ಕಾ ಅವರನ್ನು ಕೊಲ್ಲಲು ಬಳಸಿದ ಆಯುಧಗಳನ್ನು ಪೂರೈಸಿದ್ದ. ಅಲ್ಲದೇ ಪ್ರಕರಣದ ಪ್ರಮುಖ ಶಂಕಿತ ಶೂಟರ್ ಉಮೇಶ್ ಜೊತೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 12ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಟ್ರಕ್, ಕಾರು ನಡುವೆ ಅಪಘಾತ – ಭಾರತ ಮೂಲದ ನಾಲ್ವರು ಸಜೀವ ದಹನ

ಏನಿದು ಪ್ರಕರಣ?
ಬಿಹಾರದ ಪಾಟ್ನಾದಲ್ಲಿ ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು. ಗಾಂಧಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ಪನಾಚೆ ಹೋಟೆಲ್ ಪಕ್ಕದಲ್ಲಿರುವ `ಟ್ವಿನ್ ಟವರ್’ ಸೊಸೈಟಿಯಲ್ಲಿ ಖೆಮ್ಕಾ ಅವರು ವಾಸಿಸುತ್ತಿದ್ದರು. ಅವರು ಮನೆ ಕಡೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.

Share This Article