ಹುಬ್ಬಳ್ಳಿ: ಪತ್ನಿಯಿಂದ ಕಿರುಕುಳ ಆರೋಪಿಸಿ ಡೆತ್ ನೋಟ್ (Death Note) ಬರೆದಿಟ್ಟು ಪತಿ (Husbaಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ (Hubballi) ಬೆಂಗೇರಿಯ (Bengeri) ಹರಿಜನ ಕಾಲೋನಿಯಲ್ಲಿ ನಡೆದಿದೆ.
ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ಪತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಪತ್ನಿ ದೂರಿನ ಹಿನ್ನೆಲೆ ಪೊಲೀಸ್ ಠಾಣೆಗೆ ಕರೆಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ಸಂತೋಷ್ ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: Dharmasthala Case | ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್ ರಾಜ್
18 ವರ್ಷಗಳ ಹಿಂದೆ ಸಂತೋಷ್ ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿಗೆ ಸಂತೋಷ್ ಅಂಗನವಾಡಿಯಲ್ಲಿ ನೌಕರಿ ಕೊಡಿಸಿದ್ದ. ಅಂಗನವಾಡಿ ಹುದ್ದೆ ಖಾಯಂ ಆದ ನಂತರ ಪತ್ನಿ ಊರೂರು ಸುತ್ತುತ್ತಿದ್ದಳು ಎಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಗಂಡ – ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸರಿಗೆ ದೂರು ನೀಡುವ ಜೊತೆಗೆ ಪತ್ನಿ ಡಿವೋರ್ಸ್ಗೆ ಅರ್ಜಿ ಹಾಕಿದ್ದು, ಪತಿ ಜೊತೆ ಸಂಸಾರ ಮಾಡಲ್ಲ ಎಂದು ಪಟ್ಟು ಹಿಡಿದಿದ್ದರು. ಈ ಬೆಳವಣಿಗೆ ಹಿನ್ನೆಲೆ ಸಂತೋಷ್ ಸಾವಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪತ್ನಿ ಮತ್ತು ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಘಟನೆ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭವಾನಿ ಕೊಲೆ ಪ್ರಕರಣ – ವಿಷ ಕುಡಿದಂತೆ ನಾಟಕ, ಮೃತದೇಹ ತಬ್ಬಿಕೊಂಡು ಮಲಗಿದ್ದ ಆರೋಪಿ ಚಂದ್ರು
