ಕೋಲಾರ: ಬದುಕಿರುವ ವ್ಯಕ್ತಿಗಳ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ (Death Certificate) ನೋಂದಣಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೋಲಾರ ನಗರಸಭೆಯ ಹಿಂದಿನ ಆರೋಗ್ಯ ನಿರೀಕ್ಷಕ ಮೊಹಮ್ಮದ್ ನವಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳ ನೋಂದಣಿಯಲ್ಲಿ ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಜ.12, 13ಕ್ಕೆ ಅಳ್ವೆಕೋಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ಮಾರಿಜಾತ್ರಾ ಮಹೋತ್ಸವ
ಅಕ್ರಮವೆಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಕೊತ್ತೂರು ಮಂಜುನಾಥ್ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಪಿ.ಎನ್.ರವೀಂದ್ರ ಅವರು ಮೊಹಮ್ಮದ್ ನವಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ (Suspend) ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟಕ್ಕೆ ತೆರೆ: ಸರ್ಕಾರದ ಲಿಖಿತ ಆದೇಶ ಬೆನ್ನಲ್ಲೇ ಧರಣಿ ಅಂತ್ಯ
