ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ. ಪಾಕಿಸ್ತಾನ್ (Pakistan) ಜಿಂದಾಬಾದ್ ಎಂದು ವಿಧಾನಸೌಧದಲ್ಲಿ (Vidhanasoudha) ಕೂಗಿರುವ ವಿಚಾರ ಸಂಬಂಧ FSL ವರದಿಯಲ್ಲಿ ದೃಢಪಟ್ಟ ನಂತರ ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಸದ್ಯ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಬಳಿಕ ಪೊಲೀಸರು ಅವರನ್ನು ಕೋರಮಂಗಲದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್ಎಸ್ಎಲ್ ವರದಿಗೆ ಪರಮೇಶ್ವರ್ ಗರಂ
Advertisement
#SatyamevaJayate
ಸತ್ಯಮೇವ ಜಯತೇ..! #RealFactCheck
Finally FSL report out. ನಮ್ಮ ಸುದ್ದಿಯೇ ಸತ್ಯ. ನಮ್ಮ ವರದಿಯೇ ಅಸಲಿ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಮೂವರ ಬಂಧನ
3 Arrested in Bengaluru for raising Pakistan Zindabad slogan. Bengaluru Police press release. #Karnataka #FactCheckers pic.twitter.com/1HqR8pTe8j
— PublicTV (@publictvnews) March 4, 2024
Advertisement
ಈ ಸಂಬಂಧ ಸೆಂಟ್ರಲ್ ಡಿಸಿಪಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿʼಪಾಕಿಸ್ತಾನ ಜಿಂದಾಬಾದ್ʼ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ FSL ವರದಿ, ಸಾಂದರ್ಭಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಘಟನೆ ಏನು..?: 2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪಿನಿಂದ ʼಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆ ಕೇಳಿಬಂದಿತ್ತು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ಬ್ರೇಕ್ ಮಾಡಿತ್ತು. ಆದರೆ ಕಾಂಗ್ರೆಸ್ ನಾಯಕರು ಮಾಧ್ಯಮ ವರದಿ ಸುಳ್ಳೆಂದು ಹೇಳಿದ್ದರು. ಬಳಿಕ ಪೊಲೀಸರು ಆ ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದರು.