ಮಡಿಕೇರಿ: ಕರ್ನಾಟಕದ ಕಾಶ್ಮೀರ ಅಂದರೆ ಯಾರಿಗೆ ತನ್ನೆ ಇಷ್ಟ ಅಗೋಲ್ಲ ಹೇಳಿ ಅದರಲ್ಲೂ ಮಂಜಿನ ನಗರಿ ಮಡಿಕೇರಿ ರಾಜಾಸೀಟ್ (Rajaseat) ಅಂದ್ರೆ ಎಲ್ಲರಿಗೂ ಫೇವರೆಟ್. ದಿನನಿತ್ಯ ಸಾವಿರಾರು ಪ್ರವಾಸಿಗರು ರಾಜಾಸೀಟ್‌ಗೆ ಭೇಟಿ ನೀಡುತ್ತಾರೆ. ಇಂತಹ ಪ್ರವಾಸಿತಾಣದ ಅಭಿವೃದ್ಧಿ ಮಾಡುವ ನೆಪದಲ್ಲಿ ಕೋಟಿ ಕೋಟಿ ಅವವ್ಯಹಾರ ನಡೆದಿದೆಯಂತೆ ಖುದ್ದು ಲೋಕಾಯುಕ್ತ ಅಧಿಕಾರಿಗಳೇ ತನಿಖೆ ಮಾಡಲು ಲೋಕಾಯುಕ್ತ ಫೀಲ್ಡಿಗಿಳಿದಿದೆ.
Advertisement
ಮಂಜಿನ ನಗರಿಯ ರಾಜಾಸೀಟ್ ಭೂಲೋಕದ ಸ್ವರ್ಗ. ಹೀಗಾಗಿ ಈ ಪ್ರೇಕ್ಷಣೀಯ ಸ್ಥಳವನ್ನು ಇನ್ನಷ್ಟು ಅಭಿವೃದ್ಧಿ ಕಾರ್ಯವನ್ನು ಮಾಡಬೇಕು ಎಂದು ಈ ಹಿಂದಿನ ಬಿಜೆಪಿ ಸರ್ಕಾರದ ಕೋಟಿ ಕೋಟಿ ಹಣವನ್ನು ಬಿಡುಗಡೆ ಮಾಡಿತ್ತು. ಅದ್ರೆ ರಾಜಾಸೀಟ್ ಅಭಿವೃದ್ಧಿ ಹೆಸರಿನಲ್ಲಿ ಅವ್ಯವಹಾರ ನಡೆದಿದೆ. ಹೀಗಾಗಿ ಅಧಿಕಾರಿಗಳಿಗೆ ಶಾಕ್ ನೀಡಲು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ. ಪ್ರವಾಸಿತಾಣ ಗ್ರೇಟರ್ ರಾಜಾಸೀಟ್ ಹೆಸರಿನಲ್ಲಿ ಅಭಿವೃದ್ಧಿ ಪಡಿಸಲು ಈ ಹಿಂದಿನ ಬಿಜೆಪಿ ಸರ್ಕಾರ 2020ರಲ್ಲಿ ಪಣತೋಟ್ಟಿತ್ತು. ಪ್ರವಾಸೋದ್ಯಮ ಇಲಾಖೆಯ ಮೂಲಕ 4.55 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತು.
Advertisement
Advertisement
ತೋಟಗಾರಿಕೆ ಇಲಾಖೆಗೆ ಸೇರಿದ 3 ಎಕರೆ ಜಾಗದಲ್ಲಿ ಲೋಕೋಪಯೋಗಿ ಇಲಾಖೆ ಸುಮಾರು 3 ಎಕರೆ ಜಾಗದಲ್ಲಿ ಕಾಮಗಾರಿ ಆರಂಭಿಸಿತ್ತು. ಆದ್ರೆ ಕಾಮಗಾರಿ ಮುಗಿಯುವ ಮೊದಲೇ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ರು. ಆದರೆ ಈ ಕಾಮಗಾರಿಯಲ್ಲಿ ಅವ್ಯವಹಾರದ ವಾಸನೆ ಸಿಕ್ಕಿದ ಹಿನ್ನೆಲೆಯಲ್ಲಿ ಮಡಿಕೇರಿ ನಿವಾಸಿ ತೆನ್ನಿರ ಮೈನಾ ಎಂಬುವವರು ಲೋಕಯುಕ್ತಕ್ಕೆ ದೂರು ನೀಡಿದ್ರು. ಇದೀಗ ಲೋಕಾಯುಕ್ತ ಅಧಿಕಾರಿಗಳು ರಾಜಾಸೀಟ್‌ಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.
Advertisement
ಇನ್ನೂ ಉದ್ಘಾಟನೆಯಾಗಿ ವರ್ಷವಾದ್ರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿ ಮುಗಿಯದ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಹಸ್ತಾಂತರ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರ ಜೊತೆಗೆ ಕಾಮಗಾರಿ ಮಾಡಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಕಲಿ ಬಿಲ್ ಮಾಡಿ ಸರ್ಕಾರದ ಹಣಕ್ಕೆ ದ್ರೋಹ ಮಾಡಿದ್ದಾರೆ ಅನ್ನೋ ಆರೋಪವೂ ಕೇಳಿ ಬರುತ್ತಿದೆ.
ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರನ್ನು ಕೇಳಿದ್ರೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಈ ಪ್ರಾಜೆಕ್ಟ್ ಹಸ್ತಾಂತರ ಆಗಿಲ್ಲ. ಟೆಂಡರ್ ಪ್ರಕಾರ ಸಾಕಷ್ಟು ಕೆಲಸಗಳು ವಿದ್ಯುತ್ ಕೆಲಸಗಳು ಬಾಕಿ ಇದೆ ಎಂದು ಲೋಕೋಪಯೋಗಿ ಇಲಾಖೆಯಿಂದ ಮಾಹಿತಿ ನೀಡಿದ್ದಾರೆ. ಅಲ್ಲದೇ ಕಾಮಗಾರಿ ಪೂರ್ಣಗೊಂಡಿಲ್ಲ ಹೀಗಾಗಿ ಬೀಲ್ ಗಳು ಬಾಕಿ ಇದೆ. ಈ ಎಲ್ಲಾ ಕೆಲಸ ಪೂರ್ಣಗೊಂಡ ಬಳಿಕ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.