ವಾಷಿಂಗ್ಟನ್: 2016ರ ಚುನಾವಣೆಗೂ ಮುನ್ನ ಪೋರ್ನ್ ಸ್ಟಾರ್ (Porn Star) ಒಬ್ಬರಿಗೆ ಹಣ ನೀಡಿರುವ ಆರೋಪದ ಮೇಲೆ ಮಂಗಳವಾರ ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಬಂಧಿಸುವ (Arrest) ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆ ಟ್ರಂಪ್ ತಮ್ಮ ಬೆಂಬಲಿಗರಿಗೆ ಬಂಧನದ ವಿರುದ್ಧ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.
ವರದಿಗಳ ಪ್ರಕಾರ ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. 2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಈಕ್ವೆಡಾರ್‌ನಲ್ಲಿ 6.8 ತೀವ್ರತೆಯ ಭಾರೀ ಭೂಕಂಪ – 14 ಜನ ಬಲಿ
Advertisement
Advertisement
ಈ ಪ್ರಕರಣದಲ್ಲಿ ಟ್ರಂಪ್ ವಿರುದ್ಧ ಆರೋಪ ಹೊರಿಸಬೇಕೆ ಎಂಬ ಬಗ್ಗೆ ಪ್ರಾಸಿಕ್ಯೂಟರ್‌ಗಳು ಚಿಂತನೆ ನಡೆಸುತ್ತಿದ್ದಾರೆ. ಒಂದು ವೇಳೆ ಮ್ಯಾನ್‌ಹ್ಯಾಟನ್ ಜಿಲ್ಲಾ ವಕೀಲರು ಟ್ರಂಪ್ ವಿರುದ್ಧ ದೋಷಾರೋಪಣೆ ಮಾಡಿದರೆ ಅಪರಾಧದ ಆರೋಪ ಹೊತ್ತ ಮೊದಲ ಅಮೆರಿಕದ ಮಾಜಿ ಅಧ್ಯಕ್ಷ ಎನಿಸಿಕೊಳ್ಳುತ್ತಾರೆ. ಆದರೆ ಟ್ರಂಪ್ ತಾವು ಡೇನಿಯಲ್ ಜೊತೆಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಪರಾರಿ – ಪಂಜಾಬ್ ಹಲವೆಡೆ ಇಂಟರ್‌ನೆಟ್ ಸ್ಥಗಿತ