ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಶೋಷಿತ ಸಮುದಾಯದ ಹಣವನ್ನ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ (Dalit Organization Protest) ನಡೆಸಿದೆ.
Advertisement
ಚನ್ನಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ದಲಿತ ಮುಖಂಡರು (Dalits Leaders), ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಮುಡಾ ಅಕ್ರಮ ಕೇಸ್: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ
Advertisement
Advertisement
ರಾಜ್ಯ ಸರ್ಕಾರ (Karnataka Govt) ದಲಿತ ವಿರೋಧಿ ನಡೆಯನ್ನ ಅನುಸರಿಸುತ್ತಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗೆ 52,000 ಕೋಟಿ ರೂ. ಮೀಸಲಿಟಿದ್ದೇವೆ, SCSP-TSP ಯೋಜನೆಗೆ (SCSP TSP Scheme) 32,191,46 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಆಯವ್ಯಯದಲ್ಲಿ ಹೇಳಿತ್ತು. ಆದ್ರೆ ಗ್ಯಾರಂಟಿ ಯೋಜನೆಗಳಿಗೆ SCSP-TSP ಯೋಜನೆ ಹಣವನ್ನ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
Advertisement
ಸರ್ಕಾರ ಗ್ಯಾರಂಟಿಗೆ ಹಣ ಬಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟರ ಸಮುದಾಯಕ್ಕೆ ಅನ್ಯಾಯ ಮಾಡ್ತಿದೆ. ಹಾಗಾಗಿ ಕೂಡಲೇ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನ ವಾಪಸ್ಸ್ ನೀಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡುವುದುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ