ಉಡುಪಿ: ಜಿಲ್ಲೆಯ ನೇಜಾರು (Nejaru) ಸಮೀಪದ ತೃಪ್ತಿ ಲೇಔಟ್‌ನಲ್ಲಿ ಒಂದೇ ಕುಟುಂಬದ (Family) ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಪೊಲೀಸರು ಕೋರ್ಟ್‌ಗೆ (Court) ಹಾಜರುಪಡಿಸಿದ್ದಾರೆ. ಕೋರ್ಟ್ ಆರೋಪಿಯನ್ನು (Accused) 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ನೀಡಿದೆ.
ಉಡುಪಿಯಲ್ಲಿ (Udupi) ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಯ ಒಂದು ಹಂತದ ವಿಚಾರಣೆ ಮುಗಿಸಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಉಡುಪಿಯ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮುಂದೆ ಸಂಜೆ 5:15ಕ್ಕೆ ಸರಿಯಾಗಿ ಹಾಜರುಪಡಿಸಿದರು. ಕೋರ್ಟ್ ಆರೋಪಿಯ ಬಳಿ ಕೆಲ ಮಾಹಿತಿಗಳನ್ನ ಪಡೆದುಕೊಂಡಿದೆ. ಇದನ್ನೂ ಓದಿ: ಕೆಇಎ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ – ಸರ್ಕಾರದ ನಡೆಗೆ ಭಾರೀ ಆಕ್ರೋಶ
Advertisement
Advertisement
ತನಿಖಾಧಿಕಾರಿಯಾಗಿರುವ ಮಲ್ಪೆ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಆರೋಪಿಯನ್ನು 14 ದಿನಗಳ ಕಾಲ ವಿಚಾರಣೆಯ ಉದ್ದೇಶದಿಂದ ಪೊಲೀಸ್ ಕಸ್ಟಡಿಗೆ ಕೇಳಿದ್ದಾರೆ. ಪೊಲೀಸ್ ಕಸ್ಟಡಿ ಮಂಜೂರು ಮಾಡಿದ್ದು, ನವೆಂಬರ್ 28ಕ್ಕೆ ಕೋರ್ಟಿಗೆ ಆರೋಪಿಯನ್ನು ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ. ಆರೋಪಿಯನ್ನು ಪೊಲೀಸರು ಗೌಪ್ಯ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದು, ವಿಚಾರಣೆ ಮುಂದುವರೆಸಲಿದ್ದಾರೆ. ಇದನ್ನೂ ಓದಿ: ಸೋಮಶೇಖರ್ ನಮಗೆ ಬಹಳ ವಿಶೇಷ, ನಾವಿಬ್ರು ಸ್ನೇಹಿತರು: ಜಿ ಪರಮೇಶ್ವರ್
Advertisement